ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ… ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

ಕೋಲಾರದಲ್ಲಿಂದು ನೀರಾವರಿ ಸಭೆ… ಹಾಲಿನ ದರ ಏರಿಕೆ ಯಾರಿಗೆ `ಲಾಭ’….

ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳೂ ಸೇರಿದಂತೆ ಮಧ್ಯ ಕರ್ನಾಟಕದ ಬರಪೀಡಿತ ಜಿಲ್ಲೆಗಳ ಶಾಶ್ವತ ನೀರಾವರಿ ಕುರಿತ ಕನಸಿಗೆ ಕೊಳ್ಳಿ ಇಡುವ ರೀತಿಯಲ್ಲಿ ಮುಖ್ಯಮಂತ್ರಿ ಸದಾನಂದಗೌಡರು ಶಿವವೊಗ್ಗದಲ್ಲಿ ನೀಡಿರುವ ಹೇಳಿಕೆಯ ಕುರಿತು ಚರ್ಚಿಸಿ ಮುಂದಿನ ಹೋರಾಟ ರೂಪಿಸುವ ಸಲುವಾಗಿ ಬುಧವಾರ ಮಧ್ಯಾಹ್ನ ೩ ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ನೀರಾವರಿ ಹೋರಾಟ ಸಮಿತಿಯ ಸಭೆ ಕರೆಯಲಾಗಿದೆ. ಮೂರು ದಿನಗಳ ಹಿಂದೆ ತುಮಕೂರಿನಲ್ಲಿ ಪರಮಶಿವಯ್ಯ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧ ಎಂದು ಘೋಷಿಸಿದ ಮುಖ್ಯಮಂತ್ರಿ ಸದಾನಂದಗೌಡರು ಮಾರನೇ ದಿನವೇ ಶಿವವೊಗ್ಗದಲ್ಲಿ ಪರಮಶಿವಯ್ಯ ವರದಿ ಜಾರಿಗೆ ನನ್ನ ವಿರೋಧವಿದೆ ಎಂದು ಹೇಳುವ ಮೂಲಕ ನಾಡಿನ ಮುಖ್ಯಮಂತ್ರಿಯ ಕುರಿತು ಬರಪೀಡಿತ ಜಿಲ್ಲೆಗಳು ಯಾಮದೇ ರೀತಿಯಲ್ಲಿ ವಿಶ್ವಾಸ ಇರಿಸಲು ಸಾಧ್ಯವಾಗದ ರೀತಿಯಲ್ಲಿ ನಿಲುಮ ವ್ಯಕ್ತಪಡಿಸಿದ್ದಾರೆ. ಪರಮಶಿವಯ್ಯ ವರದಿ ಜಾರಿಯಿಂದ ಮಾತ್ರವೇ ಮಧ್ಯ ಕರ್ನಾಟಕದ ಹತ್ತು ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಲು ಸಾಧ್ಯ ಎಂಬ ಅಭಿಪ್ರಾಯ ಸಾರ್ವತ್ರಿಕ ವಾಗುತ್ತಿರುವ ಸಂದರ್ಭದಲ್ಲಿ ಪರಮಶಿವಯ್ಯ ವರದಿ ಜಾರಿಗೆ ನನ್ನ ವಿರೋಧವಿದೆ ಎಂಬ ಸದಾನಂದಗೌಡರ ಹೇಳಿಕೆ ಪೂರ್ವಾಗ್ರಹ ಪೀಡಿತವಷ್ಟೇ ಅಲ್ಲ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಕುದಾದುದಲ್ಲ ಎಂದು ನೀರಾವರಿ ಹೋರಾಟ ಸಮಿತಿಯು ತೀಕ್ಷಣವಾಗಿ ಪ್ರತಿಕ್ರಿಯಿಸಿದೆ. ಸದಾನಂದಗೌಡರ ಈ ಹೇಳಿಕೆ ಕುರಿತು ಚರ್ಚಿಸಿ ನಮ್ಮ ನೀರಿನ ಹಕ್ಕು ಉಳಿಸಿಕೊಂಡು ಪಡೆದುಕೊಳ್ಳುವ ಸಲುವಾಗಿ ಅನುಸರಿಸಬೇಕಾದ ಕಾರ್ಯತಂತ್ರ ಮತ್ತು ಹೋರಾಟಗಳ ಕುರಿತು ಬುಧವಾರ ಮಧ್ಯಾಹ್ನ ೩ ಗಂಟೆಗೆ ಪತ್ರಕರ್ತರ ಭವನದಲ್ಲಿ ಕರೆದಿರುವ ಸಭೆಗೆ ಜಿಲ್ಲೆಯ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಬೇಕೆಂದು ಕೋರಿದೆ…

No Comments to “ಕೋಲಾರದಲ್ಲಿಂದು ನೀರಾವರಿ ಸಭೆ… ಹಾಲಿನ ದರ ಏರಿಕೆ ಯಾರಿಗೆ `ಲಾಭ’….”

add a comment.

Leave a Reply

You must be logged in to post a comment.