ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ… ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

ಕೋಲಾರ,ಚಿಕ್ಕಬಳ್ಳಾಪುರ,ತುಮಕೂರು ಮತ್ತು ಬೆಂಗಳೂರು ಗ್ರಾ. ಜಿಲ್ಲೆಗಳ ಶಾಶ್ವತ ನೀರಾವರಿ ಯೊಜನೆಗೆ ಸಿಎಂ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌದದಲ್ಲಿ ಮಹತ್ವದ ಸಭೆ…

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ಮುಖ್ಯ ಮಂತ್ರಿ ತಮ್ಮ ಅಧ್ಯಕ್ಷತೆಯಲ್ಲಿ ಫೆ.೨ರಂದು ಸಂಜೆ ೫ಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ಕರೆದಿದ್ದಾರೆ. ಶಾಶ್ವತ ನೀರಾವರಿಗೆ ಆಗ್ರಹಿಸಿ ಇತ್ತೀಚೆಗೆ ನಾಲ್ಕೂ ಜಿಲ್ಲೆಗಳಲ್ಲಿ ಹೋರಾಟ ನಡೆಸಿ, ಪರಮಶಿವಯ್ಯ ವರದಿ ಆಧಾರಿತ ನೀರಾವರಿ ಯೊಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಆಗ್ರಹಿಸಲಾಗಿತ್ತು. ಹೋರಾಟಗಾರರ ಒತ್ತಡಕ್ಕೆ ಮಣಿದ ಮುಖ್ಯ ಮಂತ್ರಿ ಫೆಬ್ರವರಿಯಲ್ಲಿ ನಡೆಯುವ ಅಧಿವೇಶನದ ಸಂದರ್ಭದಲ್ಲಿ ಸಭೆ ಕರೆದು ಚರ್ಚಿಸುಮದಾಗಿ ಭರವಸೆ ನೀಡಿದ್ದರು. ಅದರಂತೆ ಫೆ.೨ರಂದು ನಾಲ್ಕು ಜಿಲ್ಲೆಗಳ ಸಂಸದರು,ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರ ಸಭೆಯನ್ನು ಕರೆಯಲಾಗಿದೆ. ನಾಲ್ಕು ಜಿಲ್ಲೆಗಳಿಗೆ ಎತ್ತಿನ ಹೊಳೆ ಯೊಜನೆ ಅನುಷ್ಠಾನದ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ  ಕೋಲಾರ ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲು ಕನಿಷ್ಠ ೬೨ ಟಿಎಂಸಿ ನೀರು ಅಗತ್ಯಬೀಳಲಿದೆ. ಎತ್ತಿನ ಹೊಳೆ ಯೊಜನೆ ಜಾರಿಯಿಂದ ಹೆಚ್ಚೆಂದರೆ ೧೦ ಟಿಎಂಸಿ ನೀರು ಮಾತ್ರ ಲಭ್ಯವಾಗಲಿದೆ. ಇದರಿಂದ ಯಾಮದೇ ಜಿಲ್ಲೆಗಳಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂಬುದು ನೀರಾವರಿ ತಜ್ಞ ಡಾ.ಪರಮಶಿವಯ್ಯ ಅವರ ಅಭಿಪ್ರಾಯವಾಗಿದೆ. ಆದ್ದರಿಂದ ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಿಂದ ಸಮುದ್ರದ ಪಾಲಾಗುತ್ತಿರುವ ನೀರನ್ನು ಬಯಲು ಸೀಮೆಯ ಜಿಲ್ಲೆಗಳಿಗೆ ಹರಿಸುವ ಪರಮಶಿವಯ್ಯ ವರದಿ ಆಧಾರಿತ ಯೊಜನೆಯನ್ನು ಅನುಷ್ಠಾನಗೊಳಿ ಸಬೇಕು. ಇದು ಶಾಶ್ವತ ಯೊಜನೆಯಾಗಲಿದೆ. ಎಲ್ಲರಿಗೂ ನ್ಯಾಯ ಒದಗಿಸಬಹು ದಾಗಿದೆ ಎಂಬುದು ಶಾಶ್ವತ ನೀರಾವರಿ ಹೋರಾಟಗಾರರ ಒತ್ತಾಯವಾಗಿದೆ….

No Comments to “ಕೋಲಾರ,ಚಿಕ್ಕಬಳ್ಳಾಪುರ,ತುಮಕೂರು ಮತ್ತು ಬೆಂಗಳೂರು ಗ್ರಾ. ಜಿಲ್ಲೆಗಳ ಶಾಶ್ವತ ನೀರಾವರಿ ಯೊಜನೆಗೆ ಸಿಎಂ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌದದಲ್ಲಿ ಮಹತ್ವದ ಸಭೆ…”

add a comment.

Leave a Reply

You must be logged in to post a comment.