ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ… ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

ಬಜೆಟ್‌ನಲ್ಲಿ ಕೋಲಾರಕ್ಕೆ `ಬಂಪರ್’ ಸಚಿವ ವರ್ತೂರು ಪ್ರಕಾಶ್‌ ಆಶಯ…

ಕೋಲಾರ: ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯಲ್ಲಿ ಕೋಲಾರ ಜಿಲ್ಲೆಗೆ ಯುಗಾದಿಯ ಬಂಪರ್‌ ಕೊಡುಗೆ ನೀಡಲು ಮುಖ್ಯಮಂತ್ರಿಗಳು ಸಿದ್ಧತೆ ನಡೆಸಿರುಮದಾಗಿ ಜವಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್‌. ವರ್ತೂರು ಪ್ರಕಾಶ್‌ ಅವರು ಪ್ರಕಟಿಸಿದರು. ನಗರದ ಜಿಲ್ಲಾ ರಕ್ಷಣಾಧಿಕಾರಿ ನಿವಾಸದಿಂದ ಗಾಂಧಿ ನಗರದ ಮೇಲ್ಸೆತುವೆವರೆಗೂ ೬೪ ಲಕ್ಷ ರೂ. ವೆಚ್ಚದಲ್ಲಿ ನಡೆಸಲಾ ಗುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಿನ್ನೆ ಮತ್ತು ಇಂದು ಮುಖ್ಯಮಂತ್ರಿಗಳು ನಡೆಸಿದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಮಹತ್ವಾಕಾಂಕ್ಷಿ ಯೊಜನೆಗಳನ್ನು ಜಾರಿಗೊಳಿಸಲು ತಾಮ ಮನವಿ ಮಾಡಿದ್ದಲ್ಲದೆ, ಅದಕ್ಕೆ ಅಗತ್ಯ ವಾದ ರೂಪುರೇಷೆಗಳನ್ನು ತಯಾರಿಸಲಾಗಿದೆ. ಜಿಲ್ಲೆಯ ಜನತೆಗೆ ಈ ಬಾರಿಯ ಯುಗಾದಿ ಅತ್ಯಂತ ಸಂತಸ- ಸಂಭ್ರಮ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೀರಾವರಿ ಸಮಸ್ಯೆಗಳಿಗೆ ಪರಿಹಾರ ನೀಡಲಿರುವ ಈ ಬಾರಿಯ ಬಜೆಟ್‌ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಸ್ಥರಿಗೆ ಹೊಸ ಯೊಜನೆಗಳನ್ನು ರೂಪಿಸಲು ಸಿಎಂ ಬಳಿ ಮನವಿ ಮಾಡಿದ್ದು, ಒಟ್ಟಾರೆ ಕೋಲಾರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು, ಒಂದೂವರೆ ತಿಂಗಳಲ್ಲಿ ರಸ್ತೆ ಕಾಮಗಾರಿಗಳು ಮುಗಿಯಲಿದ್ದು, ಇನ್ನಾರು ತಿಂಗಳಲ್ಲಿ ಎಲ್ಲಾ ಅಭಿವೃದ್ಧಿ ಕೆಲಸ ಗಳು ಮುಕ್ತಾಯಗೊಳ್ಳಲಿವೆ ಎಂದರು…

No Comments to “ಬಜೆಟ್‌ನಲ್ಲಿ ಕೋಲಾರಕ್ಕೆ `ಬಂಪರ್’ ಸಚಿವ ವರ್ತೂರು ಪ್ರಕಾಶ್‌ ಆಶಯ…”

add a comment.

Leave a Reply

You must be logged in to post a comment.